ಚೆಂಬು: ಮಾದಕ ವಸ್ತು ವಿರೋಧಿ ದಿನಾಚರಣೆ

0

ಸಮಾಜದ ಸ್ವಾಸ್ಥ್ಯ ಕಾಪಾಡುವ ಹೊಣೆ ಈಗಿನ ವಿದ್ಯಾರ್ಥಿಗಳ ಜವಾಬ್ದಾರಿ :ಧನಂಜಯ ಅಗೋಳಿಗಜೆ

ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಜನ ಜಾಗೃತಿ ವೇದಿಕೆ ಕೊಡಗು ಜಿಲ್ಲೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು, ಪ್ರಗತಿ ಬಂಧು ಮತ್ತು ಸ್ವ- ಸಹಾಯ ಸಂಘಗಳ ಒಕ್ಕೂಟ ಚೆಂಬು ಇವರ ಸಂಯುಕ್ತ ಆಶ್ರಯದಲ್ಲಿ ಆ.2 ರಂದು ಚೆಂಬು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ’ ನಡೆಯಿತು.

ಜನ ಜಾಗೃತಿ ವೇದಿಕೆಯ ಕೊಡಗು ಜಿಲ್ಲಾ ಉಪಾಧ್ಯಕ್ಷ ಧನಂಜಯ ಅಗೋಳಿಗಜೆ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು, ಯುವ ಸಮೂಹ ಮತ್ತು ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಕುರಿತು ಮನಮುಟ್ಟುವಂತೆ ಮಾಹಿತಿ ನೀಡಿದರು. ಇಂದು ಸಮಾಜದ ಸ್ವಾಸ್ಥ್ಯ ಕಾಪಾಡುವ ಹೊಣೆ ಈಗಿನ ವಿದ್ಯಾರ್ಥಿಗಳ ಜವಾಬ್ದಾರಿ ಎಂದು ತಿಳಿಸಿದರು. ಭಾಗವಹಿಸಿದ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿದರು.

ಯೋಜನೆಯ ಸಂಪಾಜೆ ವಲಯದ ಮೇಲ್ವಿಚಾರಕರಾದ ಸಂತೋಷ್ ರವರು ಪ್ರಾಸ್ತಾವಿಕ ಭಾಷಣ ಮಾಡಿದರು. ಎಸ್.ಡಿ.ಎಂ. ಸಿ ಅಧ್ಯಕ್ಷ ರಮೇಶ್ ಕುಮಾರ್ ರವರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ವಿದ್ಯಾರ್ಥಿನಿ ತೃಷಿಕಾ ಕಾರ್ಯಕ್ರಮ ನಿರೂಪಿಸಿದರು. ವಿಧ್ಯಾರ್ಥಿನಿ ತ್ರಿಶಾ ಸ್ವಾಗತಿಸಿ , ಹಿರಿಯ ಶಿಕ್ಷಕಿ ಆಶಾ ವಂದನಾರ್ಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿ ಚಿದಾನಂದ, ಶಾಲಾ ಶಿಕ್ಷಕ ವೃಂದ, ಕಚೇರಿ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.