ಸರಕಾರಿ ಪ್ರೌಢಶಾಲೆ ಮರ್ಕಂಜದಲ್ಲಿ ಗಜಾನನ ಯುವತಿ ಮಂಡಲ ಬೊಮ್ಮಾರು ಮರ್ಕಂಜ ಇದರ ಸದಸ್ಯರಿಂದ ಶ್ರಮ ಸೇವೆಯು ಅ. 4 ರಂದು ನಡೆಯಿತು.








ಶ್ರಮದಾನದಲ್ಲಿ ಯುವತಿ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿ ಶಾಲಾ ಆವರಣದ ಮುಂಭಾಗದಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು,ಸದಸ್ಯರು ಭಾಗವಹಿಸಿ ಶ್ರಮದಾನದಲ್ಲಿ ತೊಡಗಿಸಿಕೊಂಡರು. ಶಾಲಾ ಶಿಕ್ಷಕರು, ಅಡುಗೆ ಸಿಬ್ಬಂದಿಗಳು ಸಹಕರಿಸಿದರು.










