ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ತ್ರೀ ಮತ್ತು ಪ್ರಸೂತಿ ವಿಭಾಗ, ಮಕ್ಕಳ ವಿಭಾಗ ಹಾಗೂ ಕಮ್ಯುನಿಟಿ ಮೆಡಿಸಿನ್ ವಿಭಾಗದ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಅಂಗವಾಗಿ ತಾಯಿಯ ಹಾಲಿನ ಮಹತ್ವದ ಬಗ್ಗೆ ಕಾರ್ಯಕ್ರಮವನ್ನು ಆ. 05ರಂದು ಕುರಿತ ಕಾರ್ಯಕ್ರಮ ನಡೆಯಿತು.















ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಹಾಗೂ ವೈದ್ಯಕೀಯ ನಿರ್ದೇಶಕರಾದ ಡಾ. ಕೆ.ವಿ ಚಿದಾನಂದ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಸ್ತನ್ಯಪಾನದ ಮಹತ್ವವನ್ನು ವಿವರಿಸಿದರು.

ಸ್ತ್ರೀ ಮತ್ತು ಪ್ರಸೂತಿ ವಿಭಾಗ ಮುಖ್ಯಸ್ಥೆ ಡಾ. ಗೀತಾ ದೊಪ್ಪ, ಮಕ್ಕಳ ವಿಭಾಗ ಮುಖ್ಯಸ್ಥೆ ಸುಧಾ ರುದ್ರಪ್ಪ, ಕಮ್ಯುನಿಟಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಅಪೂರ್ವ ದೊರೆ ಶುಭ ಹಾರೈಸಿದರು. ಬಳಿಕ ಕೆವಿಜಿ ಕಾಲೇಜ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಕಿರು ಪ್ರಹಸನ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










