














ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಬಾಲ ವಿಕಾಸ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅಪ್ಸ ಬಿ.ಯುಯವರಿಗೆ ಬೀಳ್ಕೊಡುಗೆ ಮತ್ತು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ದೇವಿಕಾ ಕೆಯವರಿಗೆ ಸ್ವಾಗತ ಕಾರ್ಯಕ್ರಮ ಆ. 5 ರಂದು ಜರುಗಿತು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ವಸಂತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾರತಿ ಕೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.










