














ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಆ. 24ರಂದು ಬೆಳಿಗ್ಗೆ 10 ಗಂಟೆಗೆ ಅಂಬಟೆಡ್ಕದಲ್ಲಿರುವ ಮರಾಟಿ ಸಮಾಜ ಸೇವಾ ಸಂಘದ ಗಿರಿದರ್ಶಿನಿ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ್ ಅಜ್ಜಾವರರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿಯಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ವಿದ್ಯಾರ್ಥಿಗಳು ಅಂಕಪಟ್ಟಿ ಮತ್ತು ಸದಸ್ಯತ್ವದ ದಾಖಲಾತಿಯನ್ನು ಆ. 22ರ ಮುಂಚಿತವಾಗಿ ಸಂಘದ ಕಚೇರಿಗೆ ತಲುಪಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










