














ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 12ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆ.7ರಂದು ನಡೆಯಿತು.

ಕಾಲೇಜಿನ ರಷಶಾಸ್ತ್ರ ಮತ್ತು ಭೈಷಜ್ಯ ಕಲ್ಪನದ ವಿಭಾಗ ಮುಖ್ಯಸ್ಥರೂ, ಕೆವಿಜಿ ಆಯುರ್ವೇದ ಫಾರ್ಮಸಿ ಮತ್ತು ರಿಸರ್ಚ್ ಸೆಂಟರ್ ಇದರ ಸಿಇಒ ಆದ ಡಾ. ಪುರುಷೋತ್ತಮ ಕೆ. ಜಿ. ಯವರು ಕುರುಂಜಿ ವೆಂಕಟ್ರಮಣಗೌಡರ ತತ್ವ ಆದರ್ಶಗಳನ್ನು ತಿಳಿಸಿ ನುಡಿ ನಮನ ಸಲ್ಲಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಗಳಾದ ಡಾ. ವಿನಯ್ ಶಂಕರ್ ಭಾರಧ್ವಾಜ್ ಎಲ್ಲರನ್ನೂ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನ್ನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಅಕಾಡೆಮಿಕ್ ಕೋ ಆರ್ಡಿನೇಟರ್ ಡಾ. ಕವಿತಾ ಬಿ. ಎಂ., ಮೆಡಿಕಲ್ ಆಫೀಸರ್ ಡಾ. ಸನತ್ ಕುಮಾರ್ ಡಿ. ಜೆ., ಸಂಸ್ಥೆಯ ಬೋಧಕ -ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ದಿ. ಡಾ. ಕುರುಂಜಿ. ವೆಂಕಟರಮಣ ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.










