ಡಾ. ಕುರುಂಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳೋಣ – ಡಾ. ಕೆ.ವಿ. ಚಿದಾನಂದ
ಡಾ. ಕುರುಂಜಿಯವರು ಸುಳ್ಯದ ಅಭಿವೃದ್ಧಿಯ ಹರಿಕಾರ – ಕೆ.ಎಂ. ಮುಸ್ತಫಾ

ಡಾ. ಕುರುಂಜಿಯವರ ಜೀವನದ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ಬಂದರೆ ಅದುವೇ ಅವರಿಗೆ ಸಲ್ಲಿಸುವ ಶ್ರದ್ಧಾಂಜಲಿ. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಸುಳ್ಯವನ್ನು ಬೆಳೆಸಿದ್ದಾರೆ. ಈ ಶಿಕ್ಷಣ ಸಂಸ್ಥೆಗಳನ್ನು ಇನ್ನಷ್ಟು ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಎ.ಒ.ಎಲ್.ಇ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹೇಳಿದರು.









ಅವರು ಆ. 7ರಂದು ಸುಳ್ಯದ ಕುರುಂಜಿಭಾಗ್ ನಲ್ಲಿರುವ ಡಾ. ಕೆವಿಜಿಯವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸುವ ಸಂದರ್ಭದಲ್ಲಿ ಮಾತನಾಡಿದರು. ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ ಮಾತನಾಡಿ ಶಿಕ್ಷಣ, ಆರೋಗ್ಯ, ಕೃಷಿ, ಸಾಮಾಜಿಕ, ರಾಜಕೀಯ ಹೀಗೆ ಎಲ್ಲಾ ರಂಗಗಳಲ್ಲೂ ತಮ್ಮನ್ನು ತೊಡಗಿಸಿಕೊಂಡು ಸುಳ್ಯದ ಸಮಗ್ರ ಅಭಿವೃದ್ಧಿಗೆ ಕಾರಣಕರ್ತರಾದವರು ಡಾ. ಕುರುಂಜಿಯವರು. ಅವರ ಜೀವನವೇ ನಮಗೆ ಒಂದು ಸಂದೇಶ ಎಂದರು.
ಎ.ಒ.ಎಲ್.ಇ ಉಪಾಧ್ಯಕ್ಷೆ ಶ್ರೀಮತಿ ಶೋಭ ಚಿದಾನಂದ, ಕಾರ್ಯದರ್ಶಿ ಕೆ.ವಿ. ಹೇಮನಾಥ್, ಸದಸ್ಯ ಧನಂಜಯ ಮದುವೆಗದ್ದೆ, ಅರೆಭಾಷೆ ಅಕಾಡೆಮಿ ಸದಸ್ಯ ಸದಸ್ಯ ಡಾ. ಎನ್.ಎ. ಜ್ಞಾನೇಶ್, ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ಕೆ.ಟಿ. ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಹರೀಶ್ ಬಂಟ್ವಾಳ್, ಎನ್.ಎಂ.ಸಿ. ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲ್, ಕೆವಿಜಿ ಕಾನೂನು ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ.ವಿ. ದಾಮೋದರ ಗೌಡ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್, ಮಾಜಿ ಪ್ರಾಂಶುಪಾಲೆ ಡಾ. ಶೀಲಾ ಜಿ. ನಾಯಕ್ ಸೇರಿದಂತೆ ಸುಳ್ಯದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕೆವಿಜಿ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ಆಡಳಿತಾಧಿಕಾರಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಡಾ. ಕೆವಿಜಿಯವರ ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಡಾ. ಕೆವಿಜಿಯವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಎನ್.ಎಂ.ಸಿ. ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ಸ್ವಾಗತಿಸಿ, ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಟೀನಾ ಹೆಚ್.ಎಸ್ ವಂದಿಸಿದರು. ಎನ್.ಎಂ.ಪಿ.ಯು. ಉಪನ್ಯಾಸಕಿ ಕು. ಬೇಬಿ ವಿದ್ಯಾ ಪಿ.ಬಿ ಕಾರ್ಯಕ್ರಮ ನಿರೂಪಿಸಿದರು.










