ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆ.ವಿ.ಜಿ ಪುಣ್ಯಸ್ಮರಣೆ

0


ಶಿಕ್ಷಣಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 7ರಂದು ನೆರವೇರಿತು.


ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ. ರೈ ಮತ್ತು ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು.