ಅಡಿಕೆಗೆ ಪರ್ಯಾಯವಾಗಿ ಕಾಫಿ ಬೆಳೆಯನ್ನು ಬೆಳೆಸುವ ಬಗ್ಗೆ ಚರ್ಚೆ
ಅರಂತೋಡು ತೊಡಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಬಾರ್ಡ್ ನ ಡಿಡಿಎಂ ಆಗಿರುವ ಶ್ರೀಮತಿ ಸಂಗೀತ ಕರ್ತರವರು ಆ . 7 ರಂದು ಭೇಟಿ ನೀಡಿದರು.








ದಕ್ಷಿಣ ಕನ್ನಡದ ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಮಹತ್ವಾಕಾಂಕ್ಷಿ ಯೋಜನೆಯಾಗಿ ಸುಳ್ಯ ತಾಲ್ಲೂಕಿನಲ್ಲಿ ಅಡಿಕೆ ಹಳದಿ ರೋಗಕ್ಕೆ ಪರ್ಯಾಯವಾಗಿ ಕಾಫಿಯನ್ನು ಪ್ರಚುರ ಪಡಿಸುವ ದೃಷ್ಟಿಯಿಂದ ಯೋಜನೆಯನ್ನು ಹಮ್ಮಿಕೊಂಡಿದ್ದು ಈ ಯೋಜನೆ ಕಾರ್ಯಗತಗೊಳಿಸುವ ಮತ್ತು ಕೇಂದ್ರ ಸರ್ಕಾರದ ಮೂಲಕ ಆರ್ಥಿಕ ಸಹಕಾರವನ್ನು ನೀಡುವ ಉದ್ದೇಶಗಳಿಂದ ಯೋಜನೆಯನ್ನು ರೂಪಿಸುವ ಸಲುವಾಗಿ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತ ಮೊಟ್ಟೆ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಹಕಾರ ಸಂಘದ ಉಪಾಧ್ಯಕ್ಷರಾದ ಡಾ. ಲಕ್ಷ್ಮೀಶ ಕಲ್ಲುಮುಟ್ಲು ನಿರ್ದೇಶಕರಾದ ಉದಯ್ ಉಳುವಾರು,ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ಉಪಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಮತ್ತು ಸಹಕಾರ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.










