








ದುಗ್ಗಲಡ್ಕದ ಕೊಯಿಕುಳಿಯಲ್ಲಿ ಶ್ರೀ ಕೃಷ್ಣ ಮಂದಿರ ಕೊಯಿಕುಳಿ, ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ ಮತ್ತು ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಆ.15 ರಂದು ಕೊಯಿಕುಳಿ ಶ್ರೀ ಕೃಷ್ಣ ಮಂದಿರದ ವಠಾರದಲ್ಲಿ ನಡೆಯಲಿದೆ.
ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಣಪತಿ ಹವನ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಭಜನೆ ನಡೆಯಲಿದೆ.
ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ. ವಿಶೇಷ ಆಕರ್ಷಣೆಯಾಗಿ ಪುಟಾಣಿಗಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ ಗಾಯಕರಾದ ಕೆ.ಆರ್.ಗೋಪಾಲಕೃಷ್ಣ ಮತ್ತು ಬಳಗದವರಿಂದ ಭಕ್ತಿ ಸಂಗೀತ , ಸ್ಥಳೀಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ನಿವೃತ್ತ ದೈ.ಶಿ.ಶಿಕ್ಷಕ ರಘುನಾಥ ಶೆಟ್ಟಿ ಉಬರಡ್ಕ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.










