








ರಾಷ್ಟ್ರೀಯ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಅಂಗನವಾಡಿ ಕೇಂದ್ರದಲ್ಲಿ ಆ. 05ರಂದು ಜರುಗಿತು.
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ವಸಂತಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಉಷಾ ಪ್ರಸಾದ್ ರೈ, ಬಾಲವಿಕಾಸ ಸಮಿತಿ ಪೂರ್ವಾಧ್ಯಕ್ಷೆ ಅಪ್ಸ ಬಿ.ಯು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೆಳ್ಳಾರೆ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ದೇವಿಕಾ ಕೆ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾರತಿ ಕೆ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.










