ಕಳಂಜ: ಒಡಿಯೂರು ಸಂಘದ ವತಿಯಿಂದ ಸ್ವಚ್ಚತಾ ಕಾರ್ಯ

0

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿಜಿಯವರ ಜನ್ಮದಿನೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ನಿಟ್ಟಿನಲ್ಲಿ ಕಳಂಜ ಗ್ರಾಮದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸದಸ್ಯರು ಕಳಂಜ ಯುವಕ ಮಂಡಲದ ಆಸುಪಾಸು ಆ.2 ರಂದು ಸ್ವಚ್ಚತಾ ಕಾರ್ಯ ನಡೆಸಲಾಯಿತು.

ಈ ಭಾಗದ ಕಳೆ ಕೀಳುವ ಕೆಲಸ, ಸ್ವಚ್ಚತಾ ಕಾರ್ಯ ನಡೆಸಲಾಯಿತು. ಕಾರ್ಯ ಕ್ರಮದಲ್ಲಿ ಸಂಘದ ಗ್ರಾಮ ಸಂಯೋಜಕರು,ಸದಸ್ಯರು, ಗ್ರಾಮದ ಆಶಾಕಾರ್ಯಕರ್ತೆಯರು ಭಾಗವಹಿಸಿದ್ದರು.