ಶ್ರೀ ಜಲದುರ್ಗಾದೇವಿ ವರಮಹಾಲಕ್ಷ್ಮೀ ಪೂಜಾ ಸಮಿತಿ ಪೆರುವಾಜೆ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.8 ರಂದು ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಡೆಯಿತು.
ಬೆಳಿಗ್ಗೆ ಗಂಟೆ 9.00 ಕ್ಕೆ ಪೂಜೆ ಪ್ರಾರಂಭಗೊಂಡಿತು.
















ನೂರಾರು ಜನ ಮಾತೆಯರು
ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಮಧ್ಯಾಹ್ನ ದೇವಸ್ಥಾನದಲ್ಲಿ ಶ್ರೀ ಜಲದುರ್ಗಾದೇವಿಗೆ ವಿಶೇಷ ಪೂಜೆ ನಡೆಯಿತು.
ಬಳಿಕ ಆಗಮಿಸಿದ ನೂರಾರು ಜನ ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶ್ರೀ ಜಲದುರ್ಗಾದೇವಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಅನುಸೂಯ ಪೆರುವಾಜೆ, ಕಾರ್ಯದರ್ಶಿ ಶ್ರೀಮತಿ ರೇಣುಕಾ , ಖಜಾಂಚಿ ಶ್ರೀಮತಿ ದಿವ್ಯಲತಾ ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.










