ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಶ್ರೀ ರಾಜರಾಜೇಶ್ವರಿ ದೇವಸ್ಥಾನ ಗೌರಿಪುರಂ ಬೆಳ್ಳಾರೆ ಇದರ ಮಾತೃಮಂಡಳಿಯ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಆ. 8ರಂದು ಸಂಜೆ ದೇವಸ್ಥಾನದಲ್ಲಿ ನಡೆಯಿತು.

ಮಾತೃಮಂಡಳಿಯ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಆನಂದ ಗೌಡ, ಕಾರ್ಯದರ್ಶಿ ಜಯಶ್ರೀ ಪದ್ಮನಾಭ ಚೂಂತಾರು, ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಪಂಜಿಗಾರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಪೂಜಾ ಕಾರ್ಯದಲ್ಲಿ ಭಾಗವಹಿಸಿದರು. ಸಂಜೆ ಶ್ರೀರಾಮ ಭಜನಾ ಮಂಡಳಿ ಪೈಲಾರುರವರಿಂದ ಭಜನಾ ಕಾರ್ಯಕ್ರಮ ನಡೆದು ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.