ಕಾಯರ್ತೋಡಿ ದೇವಸ್ಥಾನದಲ್ಲಿ ಆಡಳಿತ ಮಂಡಳಿ ಕಛೇರಿ ಉದ್ಘಾಟನೆ

0


ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ಆಡಳಿತ ಮಂಡಳಿ ಕಛೇರಿ ಉದ್ಘಾಟನೆ, ದಿನೇಶ ಅಡ್ಕಾರ್‌ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದ ಕಚೇರಿಗೆ ಟೇಬಲ್ ಚೇರ್ ಒಂದು ಕೊಡಪಾನ, ಹರಿವಣ ನೀಡಿದರು.


ಈ ಸಂದರ್ಭದಲ್ಲಿ ಅವರನ್ನು ಶಾಲು ಹೊದಿಸಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೆಂಕಪ್ಪ ಗೌಡ, ದೇವಾಲಯದ ಅರ್ಚಕ ನೀಲಕಂಠ ಭಟ್ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನ ಮಂಡಳಿ ಸದಸ್ಯರು, ಸೇವಾ ಸಮಿತಿ ಸಂಚಾಲಕರು ಉಪಸ್ಥಿತರಿದ್ದರು.