














ಕಳೆದ 13 ವರ್ಷಗಳಿಂದ ಪಂಜ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ವೈದ್ಯಾಧಿಕಾರಿ ಡಾ.ಮಂಜುನಾಥ್ ಸಿ ರವರಿಗೆ ಗೌರವಾರ್ಪಣೆ ಕಾರ್ಯಕ್ರಮ ನಾಳೆ ಆ.10ರಂದು ಪೂ.10ರಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಪಂಜ ಪರಿಸರದ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ.ಕಾರ್ಯಕ್ರಮದ
ಅಧ್ಯಕ್ಷತೆಯನ್ನು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ವಹಿಸಲಿದ್ದಾರೆ. ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಗೌರವಾರ್ಪಣೆ ಮಾಡುವರು. ಸಾರ್ವಜನಿಕ ಆರಾಧನಾ ಸಮಿತಿಯ ಅಧ್ಯಕ್ಷ ಸವಿತಾರ ಮುಡೂರು ಅಭಿನಂದನಾ ಭಾಷಣ ಮಾಡುವರು.ಮುಖ್ಯ ಅತಿಥಿಗಳಾಗಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










