














ಶ್ರೀ ದುಗ್ಗಲಾಯ ಮಹಿಳಾ ಸೇವಾ ಟ್ರಸ್ಟ್ ದುಗ್ಗಲಡ್ಕ ಇದರ ವತಿಯಿಂದ ಪ್ರಥಮ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಆ.8 ರಂದು ದುಗ್ಗಲಾಯ ದೇವಸ್ಥಾನದಲ್ಲಿ ನಡೆಯಿತು.
ಸಂಜೆ 6ಕ್ಕೆ ಶ್ರೀ ವರಮಹಾಲಕ್ಷ್ಮಿ ಪೂಜೆ ಆರಂಭವಾಯಿತು. ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆಯೊಂದಿಗೆ ಸಂಪನ್ನಗೊಂಡಿತು.
ಈ ಸಂದರ್ಭದಲ್ಲಿ ಶ್ರೀ ದುಗ್ಗಲಾಯ ಮಹಿಳಾ ಸೇವಾ ಟ್ರಸ್ಟ್ ನ ಅಧ್ಯಕ್ಷೆ ಶ್ರೀಮತಿ ಪ್ರಭಾವತಿ ರೈ ದುಗ್ಗಲಡ್ಕ, ಕಾರ್ಯದರ್ಶಿ ಶ್ರೀಮತಿ ಪ್ರೇಮಾವತಿ ಈಶ್ವರಡ್ಕ, ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ರಾಘವೇಂದ್ರ ಭಟ್ ಕಲ್ದಂಬೆ, ಅಧ್ಯಕ್ಷ ಕುಶಾಲಪ್ಪ ಗೌಡ ಕಜೆ, ಮಾಜಿ ಅಧ್ಯಕ್ಷ ದಯಾನಂದ ಸಾಲಿಯಾನ್ ಮೂಡೆಕಲ್ಲು, ಕಾರ್ಯದರ್ಶಿ ಶೇಖರ ಕುದ್ಪಾಜೆ, ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಎ.ನೀರಬಿದಿರೆ, ಸದಸ್ಯ ಬಾಲಕೃಷ್ಣ ರೈ ದುಗ್ಗಲಡ್ಕ ಹಾಗೂ ಸಮಿತಿಗಳ ಸದಸ್ಯರು, ಊರ ಭಕ್ತಾದಿಗಳು ಉಪಸ್ಥಿತರಿದ್ದರು.










