














ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಆ.9ರಂದು ಸಂಭ್ರಮದ ಆಟಿಕೂಟ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ.ವಿ ಶುಭ ಹಾರೈಸಿದರು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಬಳಿಕ ತುಳುನಾಡಿನ ಮಹತ್ವವನ್ನು ಸಾರುವ ಆಟಿಕಳಂಜ, ಹಾಡು, ನೃತ್ಯದೊಂದಿಗೆ ಆರನೇ ತರಗತಿಯ ವಿದ್ಯಾರ್ಥಿಗಳು ಮನರಂಜನೆಯನ್ನು ನೀಡಿದರು. ಆದಿತ್ಯ ಪಿ, ಪ್ರಮೋದ್ ಮತ್ತು ವೇದ್ಯಾ ” ಈ ಆಟಿ ಕೂಟವು ಕೇವಲ ಹಬ್ಬವಾಗಿರದೆ, ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿ ಬೆಳೆಸುವುದಾಗಿದೆ ” ಎಂದರು. ಬಳಿಕ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಕಾರ್ಯಕ್ರಮದಲ್ಲಿ ಮನರಂಜನೆಯನ್ನು ನೀಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ವಿದ್ಯಾರ್ಥಿಗಳಾದ ದೈವಿಕ್ ಚಂದ್ ಮತ್ತು ಲಕ್ಷ್ಯ ಕುಯ್ಯಮುಡಿ ಗಿರೀಶ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಶ್ರೀಮತಿ ಸೌಮ್ಯ ಮತ್ತು ಶ್ರೀಮತಿ ಮಣಿಪವಿತ್ರ ರವರು ಸಹಕರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










