ಸುಳ್ಯ ವಿಶ್ವ ಹಿಂದೂ ಪರಿಷದ್, ಬಜರಂಗದಳ ಮಾತೃ ಶಕ್ತಿ ದುರ್ಗವಾಹಿನಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆಯ ಅಂಗವಾಗಿ ಆ. 19ರಂದು ಸುಳ್ಯದಲ್ಲಿ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಶ್ರೀ ಕೃಷ್ಣ ಪರಮಾತ್ಮನ ಚಿತ್ರ ಬಿಡುಸುವ ಸ್ಪರ್ಧೆಯು ಚೆನ್ನಕೇಶವ ದೇವಸ್ಥಾನ ದ ವಠಾರದಲ್ಲಿ ಆ. 10 ರಂದು ನಡೆಯಿತು.
















ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ಶ್ರೀಕಾಂತ್ ಗೋಲ್ವಳ್ಕರ್ ಸ್ಪರ್ಧೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಕೋಶಾಧಿಕಾರಿ ನವೀನ್ ಎಲಿಮಲೆ, ವ್ಯವಸ್ಥಾ ಪ್ರಮುಖ್ ವರ್ಷಿತ್ ಚೋಕ್ಕಾಡಿ, ಉಪಾಧ್ಯಕ್ಷ ಹರಿಪ್ರಸಾದ್ ಸುಲಾಯ, ಪ್ರಧಾನ ಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ, ಮಾತೃ ಶಕ್ತಿ ಸಂಯೋಜಕಿ ರೀನಾ ಚಂದ್ರಶೇಖರ, ನಮಿತಾ ಪ್ರವೀಣ್, ಪ್ರಕಾಶ್ ಪಲ್ಲಡ್ಕ, ಅಭಿಜಿತ್, ಪ್ರಿತೇಶ್, ರಾಜೇಶ್ ಕಲ್ಲುಮುಟ್ಲು, ನಿರ್ದೇಶ್, ನೂತನ್, ಹರ್ಷಿತ್ ಹಾಗೂ ಸಂಘಟನೆಯ ಕಾರ್ಯಕರ್ತರು ಸಹಕರಿಸಿದರು. 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಭಾಗವಾ ರು ಸ್ಪರ್ಧೆಯನ್ನು ನಡೆಸಲಾಯಿತು. ಸ್ಪರ್ಧೆಯಲ್ಲಿ ಸುಮಾರು 71 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದರು










