
ದುಗ್ಗಲಡ್ಕದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಅಯ್ಯಪ್ಪ ಭಜನಾ ಮಂದಿರದ ವಠಾರದಲ್ಲಿ ನಡೆಯಲಿರುವ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣವನ್ನು ಇಂದು ಬಿಡುಗಡೆ ಮಾಡಲಾಯಿತು. ಶ್ರೀ ದುಗ್ಗಲಾಯ ದೈವಸ್ಥಾನ ಮತ್ತು ಅಯ್ಯಪ್ಪ ಭಜನಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿ, ದುಗ್ಗಲಾಯ ದೈವಸ್ಥಾನದ ಮೊಕ್ತೇಸರರಾದ ರಾಘವೇಂದ್ರ ಭಟ್ ಕಲ್ದಂಬೆ ಬಿಡುಗಡೆಗೊಳಿಸಿದರು.
















ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಕುದ್ಪಾಜೆ, ಕಾರ್ಯದರ್ಶಿ ಸುರೇಶ್ ಮೂಡೆಕಲ್ಲು, ಗೌರವಾಧ್ಯಕ್ಷ ಧನಂಜಯ (ಮನು) ದುಗ್ಗಲಡ್ಕ, ದುಗ್ಗಲಾಯ ದೈವಸ್ಥಾನ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಕಜೆ, ಮಾಜಿ ಅಧ್ಯಕ್ಷ ದಯಾನಂದ ಸಾಲಿಯಾನ್ ಮೂಡೆಕಲ್ಲು, ಕಾರ್ಯದರ್ಶಿ ಶೇಖರ ಕುದ್ಪಾಜೆ ,ದಿನೇಶ್ ಡಿ.ಕೆ., ಬಾಬು ಮಣಿಯಾಣಿ, ಸಮಿತಿಯ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.










