ಅಡ್ಕಾರಿನಲ್ಲಿ ಅರೆಭಾಷೆ ಜಂಬರ – ಆಟಿಕೂಟಕ್ಕೆ ಚಾಲನೆ

0

ನಮ್ಮ ಬದುಕು, ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ: ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಅರೆಭಾಷೆ ಜಂಬರ ಆಟಿಕೂಟ ಕಾರ್ಯಕ್ರಮ ಆ. 10ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ನಡೆಯಿತು.

ಪ್ರಗತಿಪರ ಕೃಷಿಕ ಎ.ಆರ್.ಗಂಗಾಧರ ಗೌಡ ಅಡ್ಕಾರುರವರು ಜಂಬರಕ್ಕೆ ಚಾಲನೆ ನೀಡಿ ಆಟಿ ಆಚರಣೆ ನಮ್ಮ ಬದುಕನ್ನು ಮತ್ತೆ ಹಿಂದಿರುಗಿ ನೋಡುವ ಪ್ರಯತ್ನ ಎಂದರು.

ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಟಿ ಆಚರಣೆ ನಮ್ಮ ಬದುಕು, ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಆಯೋಜನೆ ಮಾಡುತ್ತಿದ್ದು, ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯ ನಡೆಯಬೇಕಾಗಿದೆ” ಎಂದರು.

ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಅಡ್ಕಾರು, ದೇವಸ್ಥಾನದ ಮೊಕ್ತೆಸರ ಗುರುರಾಜ್ ಭಟ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಕಾರ್ಯಕ್ರಮದ ಸಂಚಾಲಕ, ಅರೆಭಾಷೆ ಅಕಾಡೆಮಿ ಸದಸ್ಯ ಡಾ. ಜ್ಞಾನೇಶ್ ಎನ್. ಎ., ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಸದಸ್ಯರುಗಳಾದ ವಿಜಯಕುಮಾರ್ ನರಿಯೂರು, ಪುರುಷೋತ್ತಮ ನಂಗಾರು, ಹೇಮಚಂದ್ರ ಕುತ್ಯಾಳ, ವಿನೋದ್ ಮಹಾಬಲಡ್ಕ, ಸುಮತಿ ಹುಲಿಮನೆ, ಸೌಮ್ಯ ಬೈತಡ್ಕ, ಭಾರತಿ ಕೋನಡ್ಕ ಉಪಸ್ಥಿತರಿದ್ದರು.

ಯಜ್ಞೇಶ್ ಕಾಳಮ್ಮನೆ ಪ್ರಾರ್ಥಿಸಿ, ಹರಿಪ್ರಕಾಶ್ ಅಡ್ಕಾರು ಸ್ವಾಗತಿಸಿ, ಲೋಕನಾಥ್ ಮಾಸ್ಟರ್ ವಂದಿಸಿದರು. ಶಿಕ್ಷಕಿ ಹೇಮಲತಾ ಕಜೆಗದ್ದೆ ಕಾರ್ಯಕ್ರಮ ನಿರೂಪಿಸಿದರು.