ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ದೇಶಭಕ್ತಿಗೀತೆ ಗುಂಪು ಗಾಯನ ಸ್ಪರ್ಧೆ : ಫಲಿತಾಂಶ ಪ್ರಕಟ

0

ಸ್ವಾತಂತ್ರ್ಯೋತ್ಸವದ ಅಂಗವಾಗಿ ಸುದ್ದಿ ಸಮೂಹ ಸಂಸ್ಥೆ ಮತ್ತು ಡಾ. ಡಿ.ವಿ. ಲೀಲಾಧರ್ ಅವರ ಷರಾ ಪ್ರಕಾಶನ ನಡೆಸಿದ ದೇಶಭಕ್ತಿಗೀತೆಯ ಗುಂಪು ಗಾಯನ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ.

ವಿವಿಧ ಶಾಲಾ ಕಾಲೇಜು ಮತ್ತು ಸಾರ್ವಜನಿಕ ತಂಡಗಳು ಭಾಗವಹಿಸಿದ್ದ ಈ ಸ್ಪರ್ಧೆಯ ಅಂತಿಮ ಸುತ್ತಿನ ಸ್ಪರ್ಧೆಯು ಆ. 9 ರಂದು ಸುದ್ದಿ ಚಾನೆಲ್ ಸ್ಟುಡಿಯೋದಲ್ಲಿ ನಡೆದಿತ್ತು.

ಪ್ರೌಢಶಾಲಾ ವಿಭಾಗದಲ್ಲಿ ಸುಳ್ಯದ ರೋಟರಿ ಪ್ರೌಢಶಾಲೆ ಪ್ರಥಮ ಸ್ಥಾನ ಗಳಿಸಿದ್ದು, ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆ ದ್ವಿತೀಯ ಸ್ಥಾನಿಯಾಗಿದೆ.

ಕಾಲೇಜು ವಿಭಾಗದಲ್ಲಿ ಸುಳ್ಯದ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದಿದ್ದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನಿಯಾಗಿದೆ.

ಸಾರ್ವಜನಿಕ ವಿಭಾಗದಲ್ಲಿ ಸಾಹಿತ್ಯ ಸಂಗೀತ ಕಲಾ ಕೇಂದ್ರ ಸುಳ್ಯ ಪ್ರಥಮ ಸ್ಥಾನ ಪಡೆದಿದ್ದು, ಕಲಾ ಗ್ರಾಮ ಕಲ್ಮಡ್ಕ ದ್ವಿತೀಯ ಸ್ಥಾನ ಪಡೆದಿದೆ.

ಅಂತಿಮ ಸುತ್ತಿನಲ್ಲಿ ಭಾಗವಹಿಸಿದ ಎಲ್ಲಾ ತಂಡಗಳ ಗಾಯನವು ಸ್ವಾತಂತ್ರ್ಯೋತ್ಸವ ದಿನದಂದು ಸುದ್ದಿ ಚಾನೆಲ್‌ನಲ್ಲಿ ಪ್ರಸಾರಗೊಳ್ಳಲಿದೆ.