ಬೆಳ್ಳಾರೆ ಜ್ಞಾನದೀಪದಲ್ಲಿ ನಶೆ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ

0


ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸುಳ್ಯ ಶಾಖೆ ಮತ್ತು ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ ನಶೆಮುಕ್ತ ಭಾರತ ಅಭಿಯಾನದ ಅಂಗವಾಗಿ ಜಾಗೃತಿ ಮತ್ತು ರಕ್ಷಾ ಬಂಧನ ಕಾರ್ಯಕ್ರಮ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು.

ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸುಳ್ಯ ಶಾಖೆಯ ಮುಖ್ಯಸ್ಥೆ ಉಮಾ ಕಾರ್ಯಕ್ರಮವನ್ನು ಉದ್ಘಾಟಿಸಿ, ರಕ್ಷಾ ಬಂಧನ ಸಂದೇಶ ಮತ್ತು ನಶೆ ಮುಕ್ತ ಭಾರತ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಬೆಳ್ಳಾರೆ ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ನ ಉಪಾಧ್ಯಕ್ಷ ನಿಹಾನ್ ಕೆ ಜೆ ಅಧ್ಯಕ್ಷತೆ ವಹಿಸಿದ್ದರು.

ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸುಳ್ಯ ಶಾಖೆಯ ಜಾಹ್ನವಿ ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ತಾವಿಸಿ ಸ್ವಾಗತಿಸಿದರು. ಉಪನ್ಯಾಸಕ ಯೋಗೀಶ್ ತಳೂರು ಕಾರ್ಯಕ್ರಮ ನಿರ್ವಹಿಸಿದರು. ವರದಿ : ಉಮೇಶ್ ಮಣಿಕ್ಕಾರ