ಸುಳ್ಯದ ಕೆವಿಜಿ ಐಟಿಐಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

0

ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆ ಸುಳ್ಯ ಇದರ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ವೃತ್ತಿ ವರ್ಗದರ್ಶನ ಕಾರ್ಯಕ್ರಮವು ಆ. 11ರಂದು ಕೆವಿಜಿ ಐಪಿಎಸ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ದಿನೇಶ್ ಮಡ್ತಿಲ ವಹಿಸಿದ್ದರು.


ಉದ್ಘಾಟನೆಯನ್ನು ಸಂಸ್ಥೆ ಹಿರಿಯ ವಿದ್ಯಾರ್ಥಿ ಹಾಗೂ ಶಿವಮೊಗ್ಗದ ವಿಷ್ಣು ಸೋನಿ ಸರ್ವಿಸ್ ಸೆಂಟರ್ ನ ಮಾಲಕರಾದ ಸತೀಶ್ ಡಿ.ವಿ ನಡೆಸಿಕೊಟ್ಟರು. ಉದ್ಘಾಟಕರ ನೆಲೆಯಲ್ಲಿ ತಮ್ಮ ವೃತ್ತಿ ಬದುಕಿನ ಅನುಭವ ಹಾಗೂ ಸಾಧನೆಗಳನ್ನು ಹಂಚಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ವೃತ್ತಿ ಜೀವನದ ಬಗ್ಗೆ ಪ್ರೇರೇಪಿಸಿ ಮಾರ್ಗದರ್ಶನ ನೀಡಿದರು. ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾಗಿ ಉದ್ಯಮ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದ ಸತೀಶ್ ಡಿ.ವಿಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ
ಮುಖ್ಯ ಅತಿಥಿಗಳಾಗಿ ಎಒಎಲ್ಇ ಕಮಿಟಿ ಬಿ ಇದರ ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಪ್ರಸನ್ನ ಕಲ್ಲಾಜೆ, ಉಪಪ್ರಾಂಶುಪಾಲೆ ಗುಣರತ್ನ ಕೆ.ಬಿ ಹಾಗೂ ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಚೇರಿ ಸಿಬ್ಬಂದಿಗಳಾದ ನಳಿನಿ ಕೆ ಮತ್ತು ಹೇಮಾವತಿ ಕೆ ಪ್ರಾರ್ಥಿಸಿದರು. ಪ್ರಾಂಶುಪಾಲರಾದ ದಿನೇಶ್ ಮಡ್ತಿಲ ಸ್ವಾಗತಿಸಿ, ಕಿರಿಯ ತರಬೇತಿ ಅಧಿಕಾರಿ ಹೊನ್ನಪ್ಪ ಆಜಡ್ಕ ವಂದಿಸಿದರು. ಕಿರಿಯ ತರಬೇತಿ ಅಧಿಕಾರಿ ಪ್ರವೀಣ್ ಕುಮಾರ್ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.