
ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ವಾರ್ಷಿಕೋತ್ಸವ ಸಮಾರಂಭ FLORANTIA -2025 ಆ. 11ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಅರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ ಹೆಚ್.ಆರ್ ಮಾತನಾಡಿ ವಿದ್ಯಾವಂತರಾದರೆ ಸಮಾಜದಲ್ಲಿ ಉತ್ತಮ ಸಾಧನೆ ಮಾಡಬಹುದು. ಕಲಿತ ವಿದ್ಯೆಯನ್ನು ಸದುಪಯೋಗಪಡಿಸಿಕೊಳ್ಳಿ. ಕಲಿಕೆ ಎಂಬುದು ನಿರಂತರವಾಗಿರುವಂತದ್ದು ಎಂದರು.
















ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷರು ಹಾಗೂ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕೆ.ವಿ ಚಿದಾನಂದ ಮಾತನಾಡಿ ಉತ್ತಮ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಅರೋಗ್ಯ ಕ್ಷೇತ್ರಕ್ಕೆ ಉತ್ತಮ ಸೇವೆ ನೀಡಿ. ಆ ಮೂಲಕ ದೇಶಕ್ಕೆ ಕೊಡುಗೆ ನೀಡಿ ಎಂದರು. ಅಲೈಡ್ ಹೆಲ್ತ್ ಸೈನ್ಸಸ್ ನ ಪ್ರಾಂಶುಪಾಲರು ಎಒಎಲ್ಇ ಕಾರ್ಯದರ್ಶಿ ಡಾ. ಐಶ್ವರ್ಯ ಕೆ.ಸಿ. ಶುಭ ಹಾರೈಸಿದರು.
ವೇದಿಕೆಯಲ್ಲಿ ಎಒಎಲ್ಇ ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ, ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಮೈಕ್ರೋಬಯಾಲಜಿ ವಿಭಾಗದ ಪ್ರೊ. ಡಾ. ನಮೃತ ಕೆ.ಜಿ, ಪೆತಾಲಜಿ ವಿಭಾಗದ ಪ್ರೊಫೆಸರ್ ಹಾಗೂ ಅಕಾಡೆಮಿಕ್ ಕೋರ್ಡಿನೇಟರ್ ಡಾ. ನವ್ಯ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಡಾ. ನಮ್ರತಾ ಕೆ.ಜಿ ಸ್ವಾಗತಿಸಿ, ಅಂಜಲಿ ರಾವ್ ವಂದಿಸಿದರು.
ಡಾ ನವ್ಯ ಬಿ.ಎನ್ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಡಾ. ಶ್ರುತಿ ಪಿ. ರೈ ಅತಿಥಿಗಳನ್ನು ಪರಿಚಯಿಸಿದರು. ಡಾ. ರಕ್ಷಿತಾ ರಮೇಶ್ ಬಹುಮಾನದ ವಿಜೇತರ ಪಟ್ಟಿ ವಾಚಿಸಿದರು. ಪ್ರಜ್ಞಾ ಹಾಗೂ ಭಾಮಿನಿ ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ವೈವಿದ್ಯ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಪೋಷಕರು, ವಿದ್ಯಾರ್ಥಿ ವೃಂದದವರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.










