ಬೆಳ್ಳಾರೆಯ ಡಾ. ಕೆ. ಶಿವರಾಮ ಕಾರಂತ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್. ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮ

0

ಬೆಳ್ಳಾರೆಯ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದ 2025-26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟಕರು ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಂಗಳೂರು ವಿಶ್ವ ವಿದ್ಯಾಲಯದ ಕಡಬ-ಸುಳ್ಯ ವಲಯದ ಎನ್.ಎಸ್. ಎಸ್. ಸಂಚಾಲಕರಾದ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಸಮಾಜ ಶಾಸ್ತ್ರ ಉಪನ್ಯಾಸಕರು ಹಾಗೂ ಎನ್.ಎಸ್.ಎಸ್. ಘಟಕದ ಕಾರ್ಯಕ್ರಮ ಅಧಿಕಾರಿಯೂ ಆಗಿರುವ ಶ್ರೀಮತಿ ಆರತಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಇಂದಿನ ಉದ್ಯೋಗ ಮಾರುಕಟ್ಟೆಯಲ್ಲಿ ಅಭ್ಯರ್ಥಿಗಳ ಅಂಕಗಳಿಗಿಂತ ಅವರ ಮಾನಸಿಕ ಸಾಮರ್ಥ್ಯ ಮತ್ತು ಕೌಶಲ್ಯಗಳಿಗೆ ಹೆಚ್ಚಿನ ಆದ್ಯತೆ ಇದ್ದು, ಅವುಗಳನ್ನು ಗಳಿಸಲು ಎನ್.ಎಸ್.ಎಸ್. ಅತ್ಯಂತ ಮಹತ್ವ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಸುಬ್ರಹ್ಮಣ್ಯ ಪಿ.ಎಸ್. ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸೇವೆಯ ಮನೋಭಾವನೆ ಬೆಳೆಸುವಲ್ಲಿ ಎನ್.ಎಸ್.ಎಸ್ ಅತ್ಯಂತ ಪರಿಣಾಮಕಾರಿ ಎಂದು ಹೇಳಿದರು.


ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ.ಸುಪ್ರಿಯಾ ಪಿ.ಆರ್, ಎನ್. ಎಸ್.ಎಸ್ ಸಹ ಸಂಯೋಜಕರಾದ ಶ್ರೀಮತಿ ಶಾಲಿನಿ ಮತ್ತು ಇತರ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎನ್.ಎಸ್.ಎಸ್. ಘಟಕದ ಕಾರ್ಯಕ್ರಮ ಅಧಿಕಾರಿ ಶ್ರೀ ಗಿರೀಶ ಸಿ.ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಕು. ಸ್ನೇಹಾ ಸ್ವಾಗತಿಸಿ, ಕು. ಪ್ರಜ್ಞಾ ವಂದಿಸಿದರು. ಕು. ಸಿಂಚನ ಮತ್ತು ತಂಡ ಪ್ರಾರ್ಥನೆ ನೆರವೇರಿಸಿದರು. ಕು.ಮೋಕ್ಷ ಕಾರ್ಯಕ್ರಮ ನಿರೂಪಿಸಿದರು.