ಸುಳ್ಯ: ಕಾಫಿ ಬೆಳೆಗಾರರಿಗೆ ಸೂಚನೆ

0

ಸುಳ್ಯ ತಾಲೂಕಿನಲ್ಲಿ 2025-26ನೇ ಸಾಲಿನಲ್ಲಿ ಕಾಫಿ ಬೆಳೆಯನ್ನು ಉಪಬೆಳೆಯಾಗಿ ನಾಟಿ ಮಾಡಿರುವ/ಮಾಡಲಿರುವ ಕೃಷಿಕರು ತಮಗೆ ಸಂಬಂಧಪಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮಾಹಿತಿಯನ್ನು ತಕ್ಷಣ ನೋಂದಾಯಿಸಿಕೊಳ್ಳಲು ವಿನಂತಿಸಲಾಗಿದೆ.

ದಕ್ಷಿಣ ಕನ್ನಡದ ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಮಹತ್ವಾಕಾಂಕ್ಷಿ ಯೋಜನೆಯಾಗಿ ಸುಳ್ಯ ತಾಲ್ಲೂಕಿನಲ್ಲಿ ಅಡಿಕೆ ಹಳದಿ ರೋಗ ಪೀಡಿತ ಪ್ರದೇಶದಲ್ಲಿ ಪರ್ಯಾಯವಾಗಿ ಕಾಫಿಯನ್ನು ಉತ್ತೇಜಿಸುವ ದೃಷ್ಟಿಯಿಂದ ಈ ಯೋಜನೆಯನ್ನು ಹಮ್ಮಿಕೊಂಡಿದ್ದು ಆಸಕ್ತ ರೈತರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಆ.16 ಕೊನೆಯ ದಿನವಾಗಿರುತ್ತದೆ.