ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆ.10 ರಂದು ವಂದೇ ಭಾರತ್ ರೈಲುಗಳ ಉದ್ಘಾಟನೆ ಮತ್ತು ಬೆಂಗಳೂರಿನ ಜಯನಗರದಿಂದ ಎಲೆಕ್ಟ್ರಾನಿಕ್ ಸಿಟಿಯ ವರೆಗಿನ ಹಳದಿ ಮಾರ್ಗ ಮೆಟ್ರೋ ರೈಲಿನ ಉದ್ಘಾಟನೆಗೆಂದು ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ವಚನ ಅಂಬೆಕಲ್ಲು ಪ್ರಧಾನಿಯವರಿಗೆ ರಾಖಿ ಕಟ್ಟುವ ಮೂಲಕ ಸ್ವಾಗತಿಸಿದರು.















ದೇವಚಳ್ಳ ಗ್ರಾಮದ ಅಂಬೆಕಲ್ಲು ಮನೆಯವರಾಗಿದ್ದು, ಪ್ರಸ್ತುತ ಬಿಜೆಪಿ ರಾಜ್ಯ ಕಚೇರಿ ಕಾರ್ಯದರ್ಶಿಯಾಗಿರುವ ಲೋಕೇಶ್ ಅಂಬೆಕಲ್ಲು ಮತ್ತು ಶ್ರೀಮತಿ ಶಾಲಿನಿ ಲೋಕೇಶ್ ದಂಪತಿಗಳ ಪುತ್ರಿ ವಚನ ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ , ತೃತೀಯ ವರ್ಷದ ಬಿ.ಇ ಇನ್ ಎಐಎಂಎಲ್ ವ್ಯಾಸಂಗ ಮಾಡುತ್ತಿದ್ದಾರೆ.










