ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಗೆ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

0

ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ 14ರ ವಯೋಮಾನದ ಬಾಲಕಿಯರ ಚದುರಂಗ ಸ್ಪರ್ಧೆಯಲ್ಲಿ ಎಲಿಮಲೆ ಜ್ಞಾನದೀಪ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಸಾನಿಕ. ಎಂ. ಯು. ಇವರು ಭಾಗವಹಿಸಿ ತೃತೀಯ ಸ್ಥಾನ ಪಡೆದರೆ ಬಾಲಕರ ವಿಭಾಗದಲ್ಲಿ ಆಕಾಶ್. ಪಿ. 7ನೇ ತರಗತಿ 5ನೇ ಸ್ಥಾನ ಪಡೆದು ಇಬ್ಬರು ವಿದ್ಯಾರ್ಥಿಗಳು ಶಾಲಾ ಶಿಕ್ಷಣ ಇಲಾಖೆ ನಡೆಸುವ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.