ಆ. 16: ಅರಂಬೂರು ಮುಕಾಂಬಿಕಾ ಭಜನಾ ಮಂದಿರದ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದ ವಠಾರದಲ್ಲಿ ಆ. 16 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿರುವುದು.

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿದ್ದು ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಮಡಕೆ ಒಡೆಯುವ ಸ್ಪರ್ಧೆಯು ನಡೆಯಲಿದೆ.


ಭಗವದ್ಗೀತೆಯ 18 ನೇ ಅಧ್ಯಾಯಗಳಲ್ಲಿ ಒಂದು ಶ್ಲೋಕದ ಕಂಠಪಾಠ ಸ್ಪರ್ಧೆ, ಪುರುಷರಿಗೆ ಮಕ್ಕಳಿಗೆ ಮಹಿಳೆಯರಿಗೆ ಪ್ರತ್ಯೇಕವಾಗಿ ಭಕ್ತಿಗೀತೆಗಳ ಸ್ಪರ್ಧೆ, 6 ವರ್ಷದೊಳಗಿನ ಮಕ್ಕಳಿಗೆ ಶ್ರೀ ಕೃಷ್ಣ ಹಾಗೂ ರಾಧೆಯ ವೇಷಭೂಷಣ ಸ್ಪರ್ಧೆ ಅಲ್ಲದೆ ಸ್ಥಳೀಯ ಮಕ್ಕಳಿಗೆ ವಿವಿಧ ರೀತಿಯ ಸ್ಪರ್ಧೆಗಳು ಮತ್ತು ಸಾರ್ವಜನಿಕರಿಗೆ ಸ್ಪರ್ಧೆಯನ್ನುಆಚರಿಸಲಾಗಿದೆ.


ರಾತ್ರಿ ಗಂಟೆ 7:30 ರಿಂದಶ್ರೀಕೃಷ್ಣಾರಾಧನಾ ಭಜನಾ ಕಾರ್ಯಕ್ರಮ ನಡೆಯಲಿರುವುದು. ರಾತ್ರಿ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಲಿರುವುದು.