ಆ.15: ಅಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

0

ಅಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರ ಮಾರ್ಗದರ್ಶನದಂತೆ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆಯು ನಡೆಯಲಿರುವುದು.

ಬೆಳಗ್ಗೆ ನಿತ್ಯ ಪೂಜೆಯಾಗಿ ಸತ್ಯ ನಾರಾಯಣ ದೇವರ ಪೂಜೆಯು ಆರಂಭ ವಾಗಲಿರುವುದು. ಮದ್ಯಾಹ್ನ ಮಹಾಮಂಗಳಾರತಿಯಾಗಿ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆಯಾಗಲಿದೆ.


ಕೃಷ್ಣಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ, ಹಗ್ಗ ಜಗ್ಗಾಟ ಮತ್ತು ವಿವಿಧ ಸ್ಪರ್ಧೆಗಳು ನಡೆಯಲಿದ್ದು ಬೆಳಗ್ಗೆ ಉದ್ಘಾಟನಾ ಸಮಾರಂಭವು ನಡೆಯಲಿದೆ.
ಸಂಜೆ ಭಜನಾ ಸಂಕೀರ್ತನೆ ಯಾಗಿ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಲಿದೆ ಎಂದು ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಕೊಲ್ಚಾರ್ ತಿಳಿಸಿದರು.