ತನ್ನ ಸಂಬಂಧಿಯಿಂದಲೇ ಗರ್ಭವತಿಯಾದ ಕೊಲ್ಲಮೊಗ್ರದ ಅಪ್ರಾಪ್ತೆಯೊಬ್ಬಳು ಮಗುವಿಗೆ ಜನ್ಮ ನೀಡುವ ಸಂದರ್ಭ ಮಗು ಮೃತಪಟ್ಟ ಘಟನೆ ನಡೆದಿದೆ.















ಈ ಅಪ್ರಾಪ್ತ ಹುಡುಗಿ ಸಂಬಂಧಿಕರ ಮನೆಗೆ ಬಂದಿದ್ದಾಗ ಸಂಬಂಧಿ ಯುವಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನೆನ್ನಲಾಗಿದೆ. ಪರಿಣಾಮ ಆಕೆ ಗರ್ಭವತಿಯಾಗಿದ್ದಳು. ಪ್ರಕರಣ ಪೋಲೀಸ್ ಠಾಣೆ ಮೆಟ್ಟಿಲೇರಿ ಯುವಕನ ಮೇಲೆ ಫೋಕ್ಸೋ ಪ್ರಕರಣ ದಾಖಲಾಗಿ ಆತ ಜೈಲಿನಲ್ಲಿದ್ದಾನೆ
ಇದೀಗ ಅಪ್ರಾಪ್ತೆ ತುಂಬು ಗರ್ಭವತಿಯಾಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.










