ಅಮರ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಜಡ್ಕದ ಶ್ರೀ ವಿಷ್ಣು ಸಂಜೀವಿನಿ ಒಕ್ಕೂಟದ ಹಾಗೂ ಅಕ್ಷಯ ಸ್ತ್ರೀ ಶಕ್ತಿ ಗೊಂಚಲು ಇದರ ಜಂಟಿ ಆಶಯದಲ್ಲಿ ಆಟಿಕೂಟವು ಆ. 13ರಂದು ಪಂಚಾಯತ್ ಕೊರಗ ಭವನದಲ್ಲಿ ನಡೆಯಿತು.
ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಾನಕಿ ಕಂದಡ್ಕ ದೀಪ ಬೆಳಗಿಸಿ, ಚೆನ್ನೆಮಣೆ ಆಡುವುದರೊಂದಿಗೆ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ರೇಷ್ಮಾ ದಿನೇಶ್ ಬೊಳ್ಳೂರು ಆಟಿ ತಿಂಗಳ ಮಹತ್ವ ಮತ್ತು ಆಹಾರ ಪದಾರ್ಥಗಳ ಕುರಿತು ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು.















ಈ ಸಂದರ್ಭದಲ್ಲಿ ತಾಲೂಕು ಎನ್.ಆರ್. ಎಲ್. ಎಂ ಯೋಜನೆಯ ವ್ಯವಸ್ಥಾಪಕಿ ಶ್ರೀಮತಿ ಶ್ವೇತಾ,ವಲಯ ಮೇಲ್ವಿಚಾರಕಿ ಶ್ರೀಮತಿ ರೂಪ, ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಭವ್ಯ,ಅಕ್ಷಯ ಸ್ತ್ರೀ ಶಕ್ತಿ ಗೊಂಚಲು ಅಧ್ಯಕ್ಷೆ ಶ್ರೀಮತಿ ಪುಣ್ಯ, ಬ್ಲಾಕ್ ಸೊಸೈಟಿ ಸದಸ್ಯೆ ಶ್ರೀಮತಿ ನಿರ್ಮಲ ಅಕ್ಕೋಜಿಪಾಲ್, ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಮೋಕ್ಷೀತಾ, ಕು. ದಿವ್ಯ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಧರ್ಮಾವತಿ ಶೇಣಿ ಉಪಸ್ಥಿತರಿದ್ದರು.
ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಮೋಕ್ಷಿತಾ ರವರು ಹರ್ ಘರ್ ತಿರಂಗ, ಹರ್ ಘರ್ ಸ್ವಚ್ಛತಾ ಕಾರ್ಯಕ್ರಮದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಮಾದಕ ವ್ಯಸನದ ಕುರಿತು ಜಾಗೃತಿಯ ಕರಪತ್ರ( ಪರಿವರ್ತನೆ)ವನ್ನು ವಿತರಿಸಲಾಯಿತು. ಸಂಘದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಲಾಯಿತು.
ಶ್ರೀಮತಿ ನಿರ್ಮಲ ರೈ ಪ್ರಾರ್ಥಿಸಿದರು. ಶ್ರೀಮತಿ ಪ್ರಶಾಂತಿ ಸ್ವಾಗತಿಸಿ, ಒಕ್ಕೂಟದ ಎಂಬಿಕೆ ಶ್ರೀಮತಿ ಮೋಹಿನಿ ಪದವು ವಂದಿಸಿದರು. ಶ್ರೀಮತಿ ಶ್ವೇತಾ ಕಾರ್ಯಕ್ರಮ
ನಿರೂಪಿಸಿದರು.
ಸಂಘದ ಸದಸ್ಯರು ಆಟಿ ತಿಂಗಳ ವಿವಿಧ ಬಗೆಯ ಆಹಾರ ಖಾದ್ಯಗಳನ್ನು ತಯಾರಿಸಿ ತಂದಿದ್ದರು.










