ಅಮರ ಮುಡ್ನೂರು ಗ್ರಾಮದ ದೊಡ್ಡತೋಟ ಶ್ರೀರಾಮ ಭಜನಾ ಮಂದಿರದಲ್ಲಿ 18 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಅ. 17 ರಂದು ನಡೆಯಲಿರುವುದು.









ಉತ್ಸವದ ಪ್ರಯುಕ್ತ ಮಕ್ಕಳಿಗೆ ಮುದ್ದುಕೃಷ್ಣವೇಷ ಸ್ಪರ್ಧೆ ಹಾಗೂ ಸಾರ್ವಜನಿಕ ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿರುವುದು.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಆಗಮಿಸಿದ ಎಲ್ಲರಿಗೂ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿರುವುದು ಎಂದು ಸಂಘಟಕರು ತಿಳಿಸಿದರು.










