ಸುಬ್ರಹ್ಮಣ್ಯ ಕೆ. ಎಸ್. ಎಸ್. ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಕಾಲೇಜಿನ ಐ.ಕ್ಯೂ.ಎ.ಸಿ ಘಟಕ ಮತ್ತು ವಿದ್ಯಾರ್ಥಿ ಪರಿಷತ್ತು ವತಿಯಿಂದ ಆ. ರಂದು ಆಯೋಜಿಸಿತು. ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿನ ಆಂಗ್ಲ ಭಾಷಾ ಉಪನ್ಯಾಸಕರಾದ ಸುಬ್ರಹ್ಮಣ್ಯ ಎ ಯು ಇವರು ಮುಖ್ಯ ಅಭ್ಯಾಗತರಾಗಿ ಆಗಮಿಸಿ ರಕ್ಷಾ ಬಂಧನ ಸಂದೇಶ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದ್ದರು.

ವೇದಿಕೆಯಲ್ಲಿ ಐ.ಕ್ಯೂ.ಎ.ಸಿ ಘಟಕದ ಸಂಯೋಜಕಿ ಶ್ರೀಮತಿ ಲತಾ ಬಿ ಟಿ ಮತ್ತು ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶಿವಪ್ರಸಾದ್ ಎಸ್ ವಿದ್ಯಾರ್ಥಿ ಪರಿಷತ್ ಸದಸ್ಯರಾದ ಶ್ರೀಮತಿ ಕೃತಿಕಾ ಪಿ ಎಸ್ ಉಪಸ್ಥಿತರಿದ್ದರು.ವಿದ್ಯಾರ್ಥಿ ಪರಿಷತ್ತಿನ ಸಂಯೋಜಕರಾದ ಮನೋಹರ್ ಸ್ವಾಗತಿಸಿ, ತೃತೀಯ ಬಿಕಾಂ ವಿದ್ಯಾರ್ಥಿನಿ ನಿಶಾ ಗೌರಿ ವಂದಿಸಿದರು ಜೀವಿತ್, ತೃತೀಯ ಬಿ. ಕಾಂ. ಕಾರ್ಯಕ್ರಮ ನಿರೂಪಿಸಿದರು.