ಪಂಜ ಸೀಮೆಯ ದೇಗುಲದಲ್ಲಿ ಸ್ವಚತಾ ಕಾರ್ಯಕ್ರಮ

0

ಸ್ವಚ್ಛ ದೇಗುಲ ಕಾರ್ಯಕ್ರಮದಲ್ಲಿ ಆ.14 ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕೂತ್ಕುಂಜ ಒಕ್ಕೂಟ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಪಂಜ ವಲಯ ಇವರಿಂದ ಸ್ವಚ್ಛತಾ ಕಾರ್ಯಕ್ರಮ ಜರುಗಿತು.


ಸೇವಾ ಪ್ರತಿನಿಧಿ ಶ್ರೀಮತಿ ರೋಹಿಣಿ ಹಾಗೂ ಸದಸ್ಯರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಮತ್ತು ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ ಯವರು ಉಪಸ್ಥಿತರಿದ್ದರು.ದೇಗುಲದ ಅರ್ಚಕ ರಾಮಚಂದ್ರ ಭಟ್ ರವರು ಪ್ರಾರ್ಥನೆ ಮಾಡಿ ಶ್ರೀ ದೇವರ ಪ್ರಸಾದ ನೀಡಿದರು.