ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಗ್ರಂಥ ಪಾಲಕರ ದಿನಾಚರಣೆ

0

ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಗ್ರಂಥ ಪಾಲಕರ ದಿನಾಚರಣೆ ಆ. 14ರಂದು ನಡೆಯಿತು.

ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಮಿತಾ ಎಲ್. ರೈ ಕಾರ್ಯಕ್ರಮ ಉದ್ಘಾಟಿಸಿದರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಿ..ಎನ್. ಭಟ್, ಜ್ಞಾನದೀಪ ವಿದ್ಯಾಸಂಸ್ಥೆಯ ಶಿಕ್ಷಕಿ ಶ್ರೀಮತಿ ಗೀತಾ ಬಾಲಚಂದ್ರ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗ್ರಂಥಾಲಯ ಸಲಹಾ ಸಮಿತಿ ಸದಸ್ಯರಾದ ಶ್ರೀಮತಿ ಶಕೀಲಾ ವೈ. ಶೆಟ್ಟಿ ಸ್ವಾಗತಿಸಿ, ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.