ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ದ. ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವು ಆ.14 ರಂದು ನಡೆಯಿತು.

ಕಲ್ಲುಗುಂಡಿ ಮೇಲಿನ ಪೇಟೆಯಿಂದ ಗೂನಡ್ಕ ಪೇಟೆ ತನಕ ಬೃಹತ್ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ವಾಹನ ಚಾಲಕ ಮಾಲಕರು , ವರ್ತಕರು ಯುವಕ ಮಂಡಲ, ಸಂಜೀವಿನಿ ಒಕ್ಕೂಟ, ಸ್ತ್ರೀ ಶಕ್ತಿ ಸಂಘಟನೆ , ಲಯನ್ಸ್ ಕ್ಲಬ್ ಸಂಪಾಜೆ , ಬಿ.ಎಂ.ಎಸ್ ಆಟೋ ಚಾಲಕ ಸಂಘ ಕಲ್ಲುಗುಂಡಿ , ಯಶಸ್ವಿ ಯುವಕ ಮಂಡಲ ,
ಕಲ್ಲುಗುಂಡಿ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗ , ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಕುಡಿಯುವ ನೀರಿನ ವಿಭಾಗದ ಸದಸ್ಯರುಗಳು , ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.