79 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಡಪ್ಪಾಡಿ ಗ್ರಾಮ ಪಂಚಾಯತ್ ವಠಾರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಜಯರಾಮ ಇವರು ಧ್ವಜಾರೋಹಣ ಕಾರ್ಯಕ್ರಮವನ್ನು ನೇರೆವೆರಿಸಿದರು.
















ಇದೇ ಸಂದರ್ಭದಲ್ಲಿ ಗ್ರಾ.ಪಂ ನ ಸ್ವಚ್ಚ ಸಂಕಿರ್ಣದ ಸಿಬ್ಬಂದಿಯವರನ್ನು ಗೌರವಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ “ಹರ್ ಗರ್ ತಿರಂಗ” “ಹರ್ ಗರ್ ಸ್ವಚ್ಛತಾ, ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯದ ಉತ್ಸವ” ಅಭಿಯಾನದ ಪ್ರಯುಕ್ತ ಸ್ವಚ್ಚತೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮ, ಸುಳ್ಯ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಸೋಮಶೇಖರ ಕೇವಳ, ವಲಳಂಬೆ ಶ್ರೀ ಶಂಖಪಾಲ ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಅಧ್ಯಕ್ಷ ವಿನಯ ಕುಮಾರ್ ಮುಳುಗಾಡು, ಉಪಾಧ್ಯಕ್ಷ ಸಚಿನ್ ಬಳ್ಳಡ್ಕ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಪೂಂಬಾಡಿ, ನಿರ್ದೇಶಕರು, ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು,
ಗ್ರಾಮ ಪಂಚಾಯತ್ ವ್ಯಾಪ್ತಿಯ ಅಕ್ಷಯ ಸಂಜೀವಿನಿ ಒಕ್ಕೂಟದ ಸದಸ್ಯರುಗಳು, ಪದಾಧಿಕಾರಿಗಳು, ಕೃಷಿ ಸಖಿಯವರು, ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಜರಿದ್ದರು.










