ಸುಳ್ಯದ ಹಳೆ ಚಿಂತ್ರಮಂದಿರದ ಬಳಿ ಅನಾಥವಾಗಿ ಬಿದ್ದಿರುವ ಮೃತದೇಹವೊಂದು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ದೊಡ್ಡೇರಿಯ ವಾಸು ಎಂದು ಗುರುತಿಸಲಾಗಿದೆ.
ಇವರು ಕೂಲಿ ಕೆಲಸ ಮಾಡಿಕೊಂಡಿದ್ದು, ಅತಿಯಾದ ಮದ್ಯ ಸೇವನೆಯಿಂದಾಗಿ ಈ ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.















ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.










