ಕೆವಿಜಿ ಕಾನೂನು ಕಾಲೇಜಿನಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಆಚರಣೆ

0

ಸ್ವಾತಂತ್ರ‍್ಯ ಹೋರಾಟಗಾರರನ್ನು ನೆನಪಿಸುವುದು ಭಾರತದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ : ಅಕ್ಷಯ್ ಕೆ.ಸಿ.

ಕೆವಿಜಿ ಕಾನೂನು ಕಾಲೇಜಿನಲ್ಲಿ 79 ನೇ ವರ್ಷದ ಸ್ವಾತಂತ್ರ‍್ಯೋತ್ಸವ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಪ್ರಧಾನ ಕಾರ್ಯದರ್ಶಿ ಅರ್ಕಿಟೆಕ್ಟ್ ಅಕ್ಷಯ್ ಕೆ.ಸಿ. ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ‍್ಯಕ್ಕೆ ಕಾರಣಕರ್ತರಾದ ಸ್ವಾತಂತ್ರ‍್ಯ ಹೋರಾಟಗಾರರನ್ನು ನೆನಪಿಸುವುದು ಭಾರತದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಎಂದರು.

ಕಾನೂನು ಕಾಲೇಜಿನ ಆಡಳಿತಧಿಕಾರಿ ಪ್ರೊ. ಕೆ.ವಿ. ದಾಮೋದರ ಗೌಡ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ಕೋರಿದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಟೀನಾ ಎಚ್.ಎಸ್. ಸ್ವಾಗತಿಸಿದರು. ವಿದ್ಯಾರ್ಥಿ ನಾಚಪ್ಪ ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಭೋದಕ, ಭೋದಕೇತರ ವೃoದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.