ಜಾಲ್ಸೂರು ಗ್ರಾಮದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಶಾಲಾ ಸಂಚಾಲಕರಾದ ಡಾ.ಗೋಪಾಲಕೃಷ್ಣ ಭಟ್ ನೆರವೇರಿಸಿದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಗಮಿಸಿದ ಸಾಯಿ ವಿದ್ಯಾ ಇನ್‌ಸ್ಟಿಟ್ಯೂಟ್ ಬೆಂಗಳೂರು ಇಲ್ಲಿನ ಪ್ರೊಫೆಸರ್ ಮತ್ತು ವಿಭಾಗ ಮುಖ್ಯಸ್ಥರಾದ ಡಾ. ಅನಂತಯ್ಯ ಮಂಡೆಕೋಲು ಮಾತನಾಡಿದರು.















ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಡಾ. ಗೋಪಾಲಕೃಷ್ಣ ಭಟ್, ಖಜಾಂಜಿ ಸುಧಾಕರ ಕಾಮತ್, ಆಡಳಿತಾಧಿಕಾರಿ ಎನ್.ಗೋಪಾಲ ರಾವ್ ಮತ್ತು ಆಡಳಿತ ಮಂಡಳಿ ಸದಸ್ಯರಾದ ಶಿವಪ್ರಸಾದ್ ಉಗ್ರಾಣಿಮನೆ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಗಿರೀಶ್ ಕುಮಾರ್ ಸ್ವಾಗತಿಸಿದರು. ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯರಾದ ಜಯಪ್ರಸಾದ್ ಕಾರಿಂಜ ವಂದಿಸಿದರು. ಅಕ್ಷಯ್ ನವೀನ್ ಜಯನಗರ ಕಾರ್ಯಕ್ರಮ ನಿರೂಪಿಸಿದರು.
ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.










