















ಬಳ್ಪ ಗ್ರಾಮ ಪಂಚಾಯತ್ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು. ಗ್ರಾ.ಪಂ. ಅಧ್ಯಕ್ಷ ಹರ್ಷಿತ್ ಕಾರ್ಜ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಹಾತ್ಮ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಯಿತು.
ಕಾರ್ಯಕ್ರಮದಲ್ಲಿ ಪಂಚಾಯತ್ಆಡಳಿತ ಮಂಡಳಿಯ ಸದಸ್ಯರುಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿಯ ಪುಟಾಣಿಗಳು ಮತ್ತು ಪೋಷಕರು, ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.










