
ಆ.15ರ ಶುಕ್ರವಾರದಂದು ಸ್ನೇಹ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪಥ ಸಂಚಲನದ ಬಳಿಕ ಧ್ವಜಾರೋಹಣ ಗೈದ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆಯವರು ಮಾತನಾಡಿ “ವ್ಯಷ್ಟಿಗಿಂತ ಸಮಷ್ಟಿ ಮುಖ್ಯ. 1947ರಂದು ಸಿಕ್ಕಿದ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸಲು ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳು ಪಣತೊಡಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮತ್ತು ಬ್ರಿಟಿಷರ ದಾಸ್ಯದಿಂದ ಮುಕ್ತಿಯನ್ನು ಪಡೆಯುವಲ್ಲಿ ಶ್ರಮಿಸಿದ ವೀರರನ್ನು ನಾವು ಸ್ಮರಿಸಬೇಕು. ಅವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು” ಎಂದು ಹೇಳಿದರು.
















ಈ ಸಂದರ್ಭದಲ್ಲಿ ಉಪಸಿತರಿದ್ದ ಸಂಸ್ಥೆಯ ಕಾರ್ಯದರ್ಶಿಗಳಾಗಿರುವ ಡಾ. ವಿದ್ಯಾ ಶಾಂಭವ ಪಾರೆಯವರು ಶುಭಹಾರೈಸಿದರು.
ಬಳಿಕ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತ ಗಾಯನ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಸಿಹಿ ತಿಂಡಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.










