ಎಂ.ಜಿ.ಎಂ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯ ಕೊಡಿಯಾಲಬೈಲು ಮಹಾತ್ಮ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪಿ. ಎಸ್. ಗಂಗಾಧರ ಇವರು ಧ್ವಜಾರೋಹಣ ನೆರವೇರಿಸಿದರು.

ಸಂಸ್ಥೆಯ ಸಂಚಾಲಕರಾದ ದೊಡ್ಡಣ್ಣ ಬರೆಮೇಲುರವರು ಮತ್ತು ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಹರಿಪ್ರಸಾದ್ ಪಾನತ್ತಿಲರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕರಾಟೆಯಲ್ಲಿ ಸಾಧನೆಗೈದ ಕುಮಾರಿ ಜ್ಯೋಸ್ನಾಳನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರಾದ ಬೆಳ್ಯಪ್ಪ ಗೌಡ ಬಳ್ಳಡ್ಕ, ಶಿಕ್ಷಕ -ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಶ್ವೇತಾ,ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮೀ, ಸಂಸ್ಥೆಯ ಶಿಕ್ಷಕ ವೃಂದದವರು, ಶಿಕ್ಷಕೇತರ ವೃಂದದವರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸೂರ್ಯಬ್ಯಾಟರಿಯ ಮಾಲಕರಾದ ಚಂದ್ರಶೇಖರ ಹೊಸೊಳಿಕೆಯವರು ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸಹಕರಿಸಿದರು.