ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆ ಅಭಿಯಾನಕ್ಕೆ ಚಾಲನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ 15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಧ್ವಜಾರೋಹಣ ಮಾಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಶುಭಹಾರೈಸಿದರು.
















ಸ್ವಾತಂತ್ರ್ಯ ದಿನಾಚರಣೆಯೊಂದಿಗೆ
ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆ ಅಭಿಯಾನಕ್ಜೆ ಸುಬ್ರಹ್ಮಣ್ಯದಲ್ಲಿ ಚಾಲನೆ ನೀಡಲಾಯಿತು. ದೇವಾಲಯದ ರಾಜ ಗೋಪುರದಿಂದ ಕಾಶಿಕಟ್ಟೆ ತನಕ ಜಾಥಾ ಕೈಗೊಳ್ಳಲಾಯಿತು. ಅಂಗಡಿಗಳಿಗೆ ತೆರಳಿ ಕರ ಪತ್ರ ಹಂಚಲಾಯಿತು.

ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಶ್ರೀಮತಿ ಲೀಲಾ ಮನಮೋಹನ್, ಶ್ರೀಮತಿ ಪ್ರವೀಣ ರೈ, ಶ್ರೀಮತಿ ಸೌಮ್ಯ ಭರತ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಪವನ್ ಎಂ.ಡಿ, ಲೋಲಾಕ್ಷ ಕೈಕಂಬ, ಅಚ್ಚುತ ಆಲ್ಕಭೆ ಮತ್ತಿತರರು ಉಪಸ್ಥಿತರಿದ್ದರು. ದೇವಾಲಯದ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.













