ಪಂಜ ದೇಗುಲಕ್ಕೆ ನಾಗತೀರ್ಥ ಶಾಲಾ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಮೆರವಣಿಗೆ

0

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನಾಗತೀರ್ಥ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪ್ರತೀ ವರುಷದಂತೆ ಆ.15 ರಂದು ಮೆರವಣಿಗೆ ನಡೆಯಿತು.

ಬಳಿಕ ದೇಗುಲದಲ್ಲಿ ಭಜನಾ ಸಂಕೀರ್ತನೆ ನಡೆಸಿ ಶ್ರೀ ದೇವರ ಪ್ರಸಾದ, ಉಪಹಾರ ಸ್ವೀಕರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ ಕಾನತ್ತೂರ್ ಸ್ವಾಗತಿಸಿದರು. ಮೆರವಣಿಗೆಯಲ್ಲಿ ಶಿಕ್ಷಕರು, ಪೋಷಕರು ಪಾಲ್ಗೊಂಡಿದ್ದರು.