ಕನಕಮಜಲು : ಸ್ವಾತಂತ್ರ್ಯ ದಿನಾಚರಣೆ

0

ಆ.15ರಂದು ಕನಕಮಜಲು ಗ್ರಾಮ ಪಂಚಾಯತ್ ನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ “ಹರ್ ಘರ್ ತಿರಂಗ ಹರ್ ಘರ್ ಸ್ವಚ್ಚತಾ” ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಸ್ವಚ್ಚತಾಗಾರರಿಗೆ ಗೌರವಾರ್ಪನೆ ಹಾಗು ವಿಶೇಷ ಗ್ರಾಮ ಸಭೆಯನ್ನು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾ. ಪಂ. ಅಧ್ಯಕ್ಷರಾದ ಶ್ರೀಮತಿ ಶಾರದಾ ಯು ಇವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು ಗ್ರಾ.ಪಂ. ಪಉಪಾಧ್ಯಕ್ಷರಾದ ಶ್ರೀಧರ ಕುತ್ಯಾಳ ಇವರು ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿ “ಹರ್ ಘರ್ ಸ್ವಚ್ಚತಾ” ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಚತಾಕಾರ್ಯ ನಿರ್ವಹಿಸುತ್ತಿರುವ ಶ್ರೀಮತಿ ವಸಂತಿ ಇವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಹಾಗು ಸರ್ಕಾರದ ಆದೇಶದಂತೆ 79ನೇ ಸ್ವಾತಂತ್ರ್ಯ ದಿನಾಚರಣೆಯ ಕುರಿತು ವಿಶೇಷ ಗ್ರಾಮ ಸಭೆಯನ್ನು ನಡೆಸಲಾಯಿತು.

ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗು ಅರಿವು ಕೇಂದ್ರದ ವತಿಯಿಂದ ಸ್ಥಳೀಯ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ದೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾ.ಪಂ. ನ ಎಲ್ಲಾ ಸದಸ್ಯರು ಮಾಜಿ ಅಧ್ಯಕ್ಷರುಗಳು ಸದಸ್ಯರುಗಳು ಸ್ಥಳೀಯ ಶಾಲಾ ಮುಖ್ಯೋಪಾಧ್ಯಾಯರ ವಿದ್ಯಾರ್ಥಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಗ್ರಾಮಸ್ಥರು ಹಾಗು ಗ್ರಾ.ಪಂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.