ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜಾಲ್ಸೂರು ಇದರ ಆಶಯದಲ್ಲಿ 38ನೇ ವರುಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಆ.15 ರಂದು ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
















ಪಯಸ್ವಿನಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ಸದಾನಂದ ಜಾಕೆಯವರು ತೆಂಗಿನಕಾಯಿ ಒಡೆಯುವುದರ ಮೂಲಕ ಸ್ಪರ್ಧಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಶುಭ ಹಾರೈಸಿದರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ನಿಶಾಂತ್ ಮೋoಟಡ್ಕ, ಶ್ರೀ ಗುರು ರಾಘವೇಂದ್ರ ಭಜನಾ ಮಂದಿರದ ಅಧ್ಯಕ್ಷ ಜಯರಾಮ ರೈ
ಜಾಲ್ಸೂರು ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಊರಿನವರು ಉಪಸ್ಥಿತರಿದ್ದರು.
ಮಕ್ಕಳಿಗೆ, ಮಹಿಳೆಯರಿಗೆ ಪುರುಷರಿಗೆ ವಿವಿಧ ಸ್ಪರ್ಧೆಗಳು ನಡೆಯಿತು. ಸಂಜೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.










