














ದೇಶದ 79 ನೇ ಸ್ವಾತಂತ್ರ ದಿನದ ಅಂಗವಾಗಿ ಗುತ್ತಿಗಾರು ಲಯನ್ಸ್ ಸೇವಾ ಭವನದಲ್ಲಿ ಆ. 15 ರಂದು ಧ್ವಜಾರೋಹಣ ನೆರವೇರಿಸಲಾಯಿತು. ಧ್ವಜಾರೋಹಣವನ್ನು ಲಯನ್ಸ್ ಕ್ಲಬ್ ಗುತ್ತಿಗಾರು ಇದರ ಅಧ್ಯಕ್ಷರಾದ ಪ್ರವೀಣ್ ಮುಂಡೋಡಿಯವರು ನೆರವೇರಿಸಿದರು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ಕ್ಲಬ್ಬಿನ ಸದಸ್ಯರು ಭಾಗವಹಿಸಿದರು. ಕಾರ್ಯಕ್ರಮದ ಸಂಯೋಜನೆಯನ್ನು ಜಯರಾಮ ಕಡ್ಲಾರ್ ನಿರ್ವಹಿಸಿದರು. ಕಾರ್ಯದರ್ಶಿ ಆನಂದ್ ಅಂಬೆಕಲ್ಲು ವಂದನಾರ್ಪಣೆಗೈದರು.










